ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್: ದೇರಳಕಟ್ಟೆಯ ಬಿಸಿಸಿ ಹಾಲ್ನಲ್ಲಿ ರಕ್ತದಾನ ಶಿಬಿರ
ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್ನಲ್ಲಿ ರಕ್ತದಾನ ಶಿಬಿರ ನಡೆಯಿತು
ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ ಬಂದಿದ್ದು, ಇದೀಗ ಆರೋಗ್ಯಕ್ಕೆ ಸಂಬಂಧಿಸಿದ ರಕ್ತದಾನ ಶಿಬಿರ ಆಯೋಜಿಸಿದೆ. ಮುಂದಿನ ದಿನಗಳಲ್ಲಿ ಇವರಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಾಗಲಿ ಎಂದರು. ಎಸ್ ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರೀಯಾಝ್ ಫರಂಗಿಪೇಟೆ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಟ್ರಸ್ಟ್ನ ಸ್ಥಾಪಕ ಅಧ್ಯಕ್ಷರಾದ ಡಾ. ಅಬ್ದುಲ್ ಶಕೀಲ್ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಸಾಮಾಜಿಕ ಸೇವೆಯನ್ನು ಮಾಡಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೂ ನೆರವಾಗಿದೆ. ಮುಂದೆಯೂ ಇಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುದು ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಿಎಂ ಫಾರೂಕ್, ದಿ ಮೈಸೂರ್ ಇಲ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಂಗಳೂರು ತಾ.ಪಂ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು,ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕ ರಾಜ್ಯಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, ಬೆಳ್ಮ ಗ್ರಾ.ಪಂ ಅಧ್ಯಕ್ಷ ಬಿ.ಎಂ ಸತ್ತಾರ್, ಹರೇಕಳ ಗ್ರಾ.ಪಂ ಅಧ್ಯಕ್ಷ ಬದ್ರುದ್ದೀನ್, ಬೆಳ್ಮ ಗ್ರಾ.ಪಂ ಅಭಿವೃದ್ದಿ ಅಧಿಕಾಧಿ ನವೀನ್ ಹೆಗ್ಡೆ, ಕೊಣಾಜೆ ಪೋಲೀಸ್ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ ಉಪಸ್ಥಿತರಿದ್ದರು.