ತರಾತುರಿಯಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆ : ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ
ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ, ಜೊತೆಗೆ ಅವರನ್ನ ಗುರುತಿಸುವ ಕೆಲಸವನ್ನ ಕೂಡ ಅಧಿಕಾರಿಗಳು ಮಾಡಿಲ್ಲ ಎಂದು ಆರೋಪಿಸಿ ಇಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ದಲಿತ ಮುಖಂಡರಾದ ಎಂ.ದೇವದಾಸ್, ರಮೇಶ್ ಕೋಟ್ಯಾನ್, ಅಶೋಕ್ ಕೊಂಚಾಡಿ, ಚಂದ್ರಕುಮಾರ್, ಎಸ್.ಪಿ.ಅನಂದ್ ಸೇರಿದಂತೆ ಹಲವು ಮಂದಿ ಭಾಗವಹಿಸಿದ್ರು.