ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್ಗೆ ಸಾಲುಗಟ್ಟಿ ನಿಂತ ಜನತೆ
ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.
ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್ಟಿಪಿಸಿಆರ್ ಟೆಸ್ಟ್ಗೆ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಬಸ್ ಮತ್ತು ಸ್ವಂತ ವಾಹನಗಳಲ್ಲಿ ನೆಗೆಟಿವ್ ರಿಪೋರ್ಟ್ ತರದೇ ಬಂದ ಹಿನ್ನೆಲೆಯಲ್ಲಿ ಗಡಿಯಲ್ಲೇ ಸ್ವ್ಯಾಬ್ ಕೊಟ್ಟು ಮಂಗಳೂರಿಗೆ ಕೇರಳ ಭಾಗದ ಜನರು ಬರುತ್ತಿದ್ದಾರೆ. ತಲಪಾಡಿ ಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಿಂದ ಟೆಸ್ಟಿಂಗ್ ನಡೆಯುತ್ತಿದೆ. ವಿದ್ಯಾರ್ಥಿಗಳು, ವ್ಯಾಪಾರಿಗಳು ಮತ್ತು ಉದ್ಯೋಗಿಗಳು ಟೆಸ್ಟಿಂಗ್ ಮಾಡುತ್ತಿದ್ದಾರೆ.