ತಲಪಾಡಿ ಗಡಿಯಲ್ಲಿ ಜಿಲ್ಲಾಧಿಕಾರಿಯವರ ಭೇಟಿ, ಪರಿಶೀಲನೆ

ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್ ಗುರುಪ್ರಸಾದ್, ಟಿಎಚ್‌ಒ ಡಾ. ಸುಜಯ್ ಭಂಡಾರಿ, ವೈದ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.