ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿದ ಸಚಿವ ಎಸ್.ಅಂಗಾರ
ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.
ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ಸರ್ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ತುಳು ಸಾಹಿತ್ಯ ಅಕಾಡೆಮಿಯ ಅಕಾಡೆಮಿ ಸದಸ್ಯರುಗಳಾದ ನಾಗೇಶ್ ಕುಲಾಲ್, ಚೇತಕ್ ಪೂಜಾರಿ, ನಿಟ್ಟೆ ಶಶಿಧರ್ ಶೆಟ್ಟಿ, ರವೀಂದ್ರ ಶೆಟ್ಟಿ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.