ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ
ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪ್ರಧಾನಿ ಮೋದಿ ನೇತೃತ್ವದ ಸರಕಾರ ಪದೇ ಪದೇ ಡೀಸೆಲ್, ಪೆಟ್ರೋಲ್ ಜತೆಗೆ ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಈ ಕೊರೋನ ಸಂಕಷ್ಟದಲ್ಕಿ ಮತ್ತಷ್ಟು ತೊಂದರೆ ಕೊಡುತ್ತಿದೆ ಎಂದರು. ತದ ಬಳಿಕ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಮಾತನಾಡಿ, ಒಂದು ತಿಂಗಳ ಅವಧಿಯಲ್ಕಿ 18 ಬಾರಿ ತೈಲಗಳ ಬೆಲೆ ಏರಿಕೆ ಮಾಡಲಾಗಿದೆ. 30 ರೂ.ಗೆ ಸಿಗಬೇಕಿದ್ದ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜನರ ಶಾಪ ಸರಕಾರಕ್ಕೆ ತಟ್ಟದಿರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಇಬ್ರಾಹಿಂ ಕೋಡಿಜಾಲ್ , ಶಾಹುಲ್ ಹಮೀದ್, ಸದಾಶಿವ ಉಳ್ಳಾಲ್, ರಮಾನಂದ ಪೂಜಾರಿ, ನಝೀರ್ ಬಜಾಲ್ ಹಾಗೂ ಇತರರು ಉಪಸ್ಥಿತರಿದ್ದರು.