ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ : ಕುದ್ಕಾಡಿ ನಾರಾಯಣ ರೈ ಕಸ್ಟಡಿಯಿಂದ ಆಸ್ಪತ್ರೆಗೆ ದಾಖಲು
ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣರಾದ ಆರೋಪ ಎದುರಿಸುತ್ತಿರುವ ಕುದ್ಕಾಡಿ ನಾರಾಯಣ ರೈಯವರನ್ನು ವಿಚಾರಣೆಗಾಗಿ ಪುತ್ತೂರು ಸೆಷೆನ್ಸ್ ನ್ಯಾಯಾಲಯ ಎರಡು ದಿನ ಪೊಲೀಸ್ರ ವಶಕ್ಕೆ ಒಪ್ಪಿಸಿ ಆದೇಶಿಸಿತ್ತು. ಆದೇಶದ ಬೆನ್ನಲ್ಲೆ ಅನಾರೋಗ್ಯದ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿಯೊಂದಿಗೆ ನಾರಾಯಣ ರೈ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಅವರು ದಾಖಲಾಗಿರುವ ಕೊಠಡಿಗೆ ಪೊಲೀಸ್ ಕಾವಲು ಏರ್ಪಡಿಸಲಾಗಿದೆ.