ದೀಪ ಬೆಳಕು ನೀಡಿದಂತೆ ಮನಸ್ಸು, ಹೃದಯ ಬೆಳಕಾಗಲಿ : ಡಾ. ಪ್ರಭಾಕರ ಭಟ್ ಕಲ್ಲಡ್ಕ
ಪುತ್ತೂರು: ಹಿಂದೂ ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ ಮನೆಯಲ್ಲಿ ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮರಸ್ಯ ವಿಭಾಗದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಉರ್ಲಾಂಡಿ ನಾಯರಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ದೀಪದ ಬೆಳಕನ್ನು ಮನೆ ಮನೆಗಳಿಗೆ ಪ್ರದಾನ ಮಾಡಿದ ಬಳಿಕ ನಾಯರಡ್ಕ ಶ್ರೀ ಸತ್ಯನಾರಾಯಣ ಪೂಜಾ ಕಟ್ಟೆಯಲ್ಲಿ ಗೋಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ, ಸಾಮರಸ್ಯ ಮಂಗಳೂರು ವಿಭಾಗ ಸಂಚಾಲಕ ರವೀಂದ್ರ ಪಿ, ಪುತ್ತೂರು ವಿಭಾಗದ ಸಂಯೋಜಕ ದಯಾನಂದ್, ಸ್ಥಳೀಯರಾದ ಪ್ರಸನ್ನ ವೇದಿಕೆಯಲ್ಲಿ ಉಪಸ್ಥಿತರಿದ್ದರು.