ದ.ಕ. ಜಿಲ್ಲಾಡಳಿತ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ ಕೊರೋನಾ ಮುಕ್ತವಾಗಲಿ ಎಂದು ಅವರು ಹೇಳಿದರು.ಇದೇ ವೇಳೆ ಜಿಲ್ಲಾಧಿಕಾರಿ ಡಾ: ರಾಜೇಂದ್ರ ಕೆ.ವಿ ಮಾತನಾಡಿ, ಸರ್ಕಾರ ವತಿಯಿಂದ ನಡೆಯುವ ಕಾರ್ಯಕ್ರಮ ಅರ್ಥ ಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಅವರು ಹೇಳಿದರು.
ಇದೇ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು ಇನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತು.