ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಕ್ಕಳಿಗೆ ಆರೋಗ್ಯಕರ ಕಿಟ್ ವಿತರಣೆ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು.
ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಮಕ್ಕಳಿಗೆ ಮೂರನೇ ಅಲೆಯನ್ನು ಎದುರಿಸಲು ಆರೋಗ್ಯ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು.
ಆನಂತರ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಸಾಂಕ್ರಾಮಿಕರ ರೋಗದ ಈ ಸಂದರ್ಭದಲ್ಲಿ ಮಕ್ಕಳಿಗೆ ಆರೋಗ್ಯಕರ ಕಿಟ್‌ಗಳನ್ನು ವಿತರಿಸಿ ರಾಹುಲ್ ರಾಂಧಿಯವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರಾದ ಶಾಲೆಟ್ ಪಿಂಟೋ, ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮಿಥುನ್ ರೈ, ಶಾಹುಲ್ ಹಮೀದ್, ಮೊದಲಾದವರು ಉಪಸ್ಥಿತರಿದ್ದರು.