ದ.ಕ. ಜಿಲ್ಲೆಯಲ್ಲಿ ಅಂಗನವಾಡಿ ಶಾಲೆ ಆರಂಭ
ಕೊರೊನಾ ಆತಂಕ ಮರೆಯಾಗುತ್ತಿದ್ದಂತೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿದ್ದು, ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಅಂಗನವಾಡಿಗಳಲ್ಲಿ ಮಕ್ಕಳ ಕಲರವ ಮೊಳಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಂಗನವಾಡಿ ಶಾಲೆಗಳನ್ನು ಆರಂಭಿಸಲಾಗಿದೆ. ಇಂದು ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಅಂಗನವಾಡಿ ಶಾಲೆಯ ಸಿಬ್ಬಂದಿ ವರ್ಗದವರು ಪುಟಾಣಿ ಮಕ್ಕಳನ್ನು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.