ದ.ಕ. ಜಿ.ಪಂ.ನಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಚಾಲನೆ
ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2ರ ಮಾರ್ಗಸೂಚಿಗಳನ್ವಯ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಜಿಪಂ ಸಿಇಒ ಡಾ.ಕುಮಾರ್ ಚಾಲನೆ ನೀಡಿದರು.ವೈಜ್ಞಾನಿಕ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ತಂತ್ರಜ್ಞಾನಗಳನ್ನು ಗುರುತಿಸಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಮತ್ತು ಅನುಷ್ಠಾನಗೊಳಿಸಲು ಬೆಂಗಳೂರಿನ ಸಿಡಿಡಿ ಸಂಸ್ಥೆಯ ತಾಂತ್ರಿಕ ಸಹಕಾರದೊಂದಿಗೆ ಆ.27ರಿಂದ 29ರವರಗೆ ಜಿಲ್ಲೆಯ ಎಲ್ಲಾ ತಾಂತ್ರಿಕ ವರ್ಗದ ಅಧಿಕಾರಿ ಸಿಬ್ಬಂದಿಗೆ ಅಡ್ವಾನ್ಸ್ ಮಾಡ್ಯುಲ್ ತರಬೇತಿಯನ್ನು ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ದಿವ್ಯಾ ಮತ್ತು ಚಾರ್ಲ್ಸ್ ಹಾಗೂ ಸ್ವಚ್ಛ ಭಾರತ್ ಮಿಷನ್‌ನ ಯೋಜನೆಯ ಜಿಲ್ಲಾ ಸಮಾಲೋಚಕರು ಉಪಸ್ಥಿತರಿದ್ದರು.