ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ವೈದ್ಯರು ನಡೆಸುತ್ತಿದ್ದಾರೆ. ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಈ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗುತ್ತಿದೆ.