ನಟ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ || Puneeth Rajkumar

ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‍ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್‍ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುನೀತ್ ಅವರಿಗೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಘಟಕದಲ್ಲಿ ತುರ್ತು ಚಿಕಿತ್ಸೆ ನೀಡಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪುನೀತ್ ಅವರು ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಅಲ್ಲದೆ, ರಾಜ್‍ಕುಮಾರ್ ಕುಟುಂಬದಿಂದ ಬಂದಿರುವ ಪ್ರತಿಭಾವಂತ ನಟನಾಗಿದ್ದ ಪುನೀತ್, ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು.ಪುನೀತ್ ನಿಧನದ ಸುದ್ದಿ ಖಚಿತವಾಗುತ್ತಿದ್ದಂತೆಪೊಲೀಸ್ ಅಧಿಕಾರಿಗಳು, ಸಚಿವರು ಮತ್ತು ಅಧಿಕಾರಿ ವರ್ಗ ಮತ್ತು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದರು.

ವರನಟ ಡಾ| ರಾಜ್ ಕುಮಾರ್ ಅವರ ಐದನೇ ಪುತ್ರನಾದ ಪುನೀತ್ ಅವರು 1975ರ ಮಾರ್ಚ್ 17ರಂದು ಜನಿಸಿದರು. ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್ ರಾಜ್ ಕುಮಾರ್ ಅವರು ಅಪ್ಪು ಚಿತ್ರದ ಮೂಲಕ ನಾಯಕನಟನಾಗಿದ್ದರು. ನಂತರ ಅಭಿ, ಆಕಾಶ್, ನಮ್ಮ ಬಸವ, ಜಾಕಿ, ಹುಡುಗರು, ರಾಜಕುಮಾರ ಮುಂತಾದ ಚಿತ್ರಗಳಲ್ಲಿ
`ಯುವರತ್ನ’ ಪುನೀತ್ ಅವರ ಬಿಡುಗಡೆಯಾದ ಕೊನೆಯ ಚಿತ್ರ, ಜೇಮ್ಸ್ ಚಿತ್ರದ ಶೂಟಿಂಗ್ ಮುಗಿದಿದ್ದು, ಬಿಡುಗಡೆಯ ಸನಿಹದಲ್ಲಿದೆ.1999 ಡಿಸೆಂಬರ್ 1ರಂದು ಚಿಕ್ಕಮಗಳೂರಿನ ಅಶ್ವಿನಿ ರೇವಂತ್ ಅವರನ್ನು ಪುನೀತ್ ವಿವಾಹವಾಗಿದ್ದರು. ದಂಪತಿಗೆ ದೃತಿ ಮತ್ತು ವಂದಿತಾ ಎಂಬ ಹೆಣ್ಣು ಮಕ್ಕಳಿದ್ದಾರೆ. ವಿಕ್ರಮ್ ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಹೋದರ ಶಿವರಾಜ್ ಕುಮಾರ್, ನಟ ರವಿಚಂದ್ರನ್, ನಟಿ ಶ್ರುತಿ ಸೇರಿದಂತೆ ಹಲವರು ಆಗಮಿಸಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಥಳಕ್ಕಾಗಮಿಸಿದ್ದು, ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

Related Posts

Leave a Reply

Your email address will not be published.