ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಂಬಂಧಿಕರ ಮನೆಯಲ್ಲಿ ಪತ್ತೆ
ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.
ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದು, ನಂತರ ಮಧ್ಯಾಹ್ನ 12.40 ಕ್ಕೆ ಕಾಲೇಜು ವಿದ್ಯಾರ್ಥಿಗಳು ಊಟಕ್ಕೆಂದು ವಸತಿ ನಿಲಯಕ್ಕೆ ಬಂದಾಗ ಅಂಜನ್ ಕಾಲೇಜಿಗೆ ಹೋಗದೇ ಇರುವ ವಿಚಾರ ವಿದ್ಯಾರ್ಥಿಗಳಿಂದ ವಸತಿ ನಿಲಯದ ಮ್ಯಾನೇಜರ್ಗೆ ತಿಳಿದು ಬಂದಿದ್ದು,ನಂತರ ಎಲ್ಲಾ ಕಡೆ ವಿಚಾರಿಸಿದಾಗ ಎಲ್ಲೂ ಇಲ್ಲದನ್ನು ತಿಳಿದ ಬಳಿಕ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಸಂಬಂಧಿಕರ ಮನೆಯಲ್ಲಿ ಆತ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.