ನಾರಾಯಣ ಗುರು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ
ಮಂಗಳೂರಿನ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಜುಲೈ 25ರಿಂದ 31ರ ವರೆಗೆ ಬಿಕಾಂ ತರಗತಿಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.ನಗರದ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದು, ಅದರಂತೆ ಜುಲೈ 25ರಿಂದ ಜುಲೈ 31ರ ವರೆಗೆ ದಾಖಲಾತಿ ಮಾಡಿಕೊಳ್ಳುವ ವಿದ್ಯಾರ್ಥಿನಿಯರಿಗೆ ಪೂರ್ಣವಾಗಿ ಉಚಿತ ಶಿಕ್ಷಣ ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವಸಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ 0824 2493517, 8105398270.