ನಿಷೇಧಿತ ಮಾದಕ ವಸ್ತು ಸಾಗಾಟ ಪ್ರಕರಣ- ಮೂವರ ಬಂಧನ
ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನಿಷೇಧಿತ ಮಾದಕ ವಸ್ತು ಅಕ್ರಮ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರಿಂದ 170 ಗ್ರಾಂ ತೂಕದ ಸುಮಾರು 10,20,000 ರೂಪಾಯಿ ಮೌಲ್ಯದ ಎಂ.ಡಿ.ಎಂ.ಎ ಹಾಗೂ ಉಪಯೋಗಿಸಿದ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಂಜೇಶ್ವರ ಉಪ್ಪಳ ಗೇಟ್ ನಿವಾಸಿಗಳಾದ ಮಹಮ್ಮದ್ ಮುನಾಫ್, ಮಹಮ್ಮದ್ ಮುಝಾಂಬಿಲ್, ಅಹಮ್ಮದ್ ಮಸೂಕ್ ಅವರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭ ಡಿಸಿಪಿಗಳಾದ ಹರಿರಾಂ ಶಂಕರ್, ರಂಜಿತ್ ಕುಮಾರ್ ಉಪಸ್ಥಿತರಿದ್ದರು.