ನೀರುಮಾರ್ಗ ಗ್ರಾ.ಪಂ.ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ: ಬಿಜೆಪಿ ಬೆಂಬಲಿತ ಸದಸ್ಯರಿಂದ ಪ್ರತಿಭಟನೆ
ಮಂಗಳೂರಿನ ನೀರುಮಾರ್ಗ ಗ್ರಾಮ ಪಂಚಾಯತ್ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು ನೀರುಮಾರ್ಗ ಗ್ರಾಮ ಪಂಚಾಯತ್ನಲ್ಲಿ ಅಭಿವೃದ್ದಿ ವಿಚಾರದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಸದಸ್ಯರು ಧ್ವನಿ ಎತ್ತಿದ್ದಾರೆ. ಮಾತ್ರವಲ್ಲದೆ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.