ಪದ್ಮಶ್ರೀ ಪುರಸ್ಕಾರಗೊಂಡ ಹಾಜಬ್ಬ ಶಾಲೆ ಹಾಗೂ ಮನೆಯಲ್ಲಿ ಸಂಭ್ರಮ
ಹರೇಕಳ ಹಾಜಬ್ಬ ಅವರು ಕಟ್ಟಿ ಬೆಳೆಸಿದ ನ್ಯೂಪಡ್ಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶಾಲೆ ಯಜಮಾನನಿಗೆ ಪ್ರಶಸ್ತಿ ಪ್ರಧಾನ ನಡೆಯುವ ವೇಳೆ ಬ್ಯಾಂಡ್ ಹಾಗೂ ಚಪ್ಪಾಳೆ ಮೂಲಕ ಹಾಜಬ್ಬರನ್ನು ಹಾಡಿ ಹೊಗಳುವ ಮೂಲಕ ಗೌರವ ಸಮರ್ಪಿಸಿದರು. ಮನೆಯಲ್ಲಿ ಪತ್ನಿ , ಮೂವರು ಮಕ್ಕಳು ಹಾಗೂ ಸಂಬಂಧಿಕರು ಮೊಬೈಲ್ ಮೂಲಕ ಮನೆ ಯಜಮಾನ ಪದ್ಮಶ್ರೀ ಪುರಸ್ಕಾರ ಪಡೆಯುವುದನ್ನು ನೋಡಿ ಸಂಭ್ರಮಿಸಿದರು.
ಶಾಲಾ ವಿದ್ಯಾರ್ಥಿ ಗಳಿಗೆ ಹರೇಕಳ ಹಾಜಬ್ಬನವರು ಪದ್ಮಶ್ರೀ ಪುರಸ್ಕಾರ ಪಡೆಯುವ ವೀಡಿಯೋವನ್ನು ಪ್ರಾಜೆಕ್ಟರ್ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಪತ್ನಿ ಮೈಮುನಾ , ಪುತ್ರ ಇಸ್ಮಾಯಿಲ್ ಹಾಗೂ ಸಂಬಂಧಿ ನಿಸಾರ್ ಹಾಗೂ ಇಬ್ಬರು ಪುತ್ರಿಯರು ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಪಡೆಯುವುದನ್ನು ನೋಡಿ ಆನಂದಿಸಿದರು.