ಪುತ್ತೂರಿನಲ್ಲಿ ಅಮರ್ ಜವಾನ್ ಜ್ಯೋತಿಗೆ ಹಾನಿ: ದೂರು ದಾಖಲು

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಕುರಿತು ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Posts

Leave a Reply

Your email address will not be published.