HomeFresh Newsಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕಾಗಿ...

ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ.

ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ತುರ್ತಾಗಿ ಗೂಗಲ್ ಪೇ ಮಾಡುವಂತೆ ಕೇಳಲಾಗುತ್ತಿದೆ. ಪತ್ರಕರ್ತರೋರ್ವರಿಗೂ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣ ಕೇಳಲಾಗಿದೆ. ನಕಲಿ ಖಾತೆ ಸೃಷ್ಠಿಸಿ ಹಣಕ್ಕೆ ಬೇಡಿಕೆ ಇಡುತ್ತಿರುವ ಕುರಿತು ಮಲ್ಲಿಕಾ ಪ್ರಸಾದ್ ಅವರ ಗಮನಕ್ಕೆ ತರಲಾಗಿದ್ದು ಪುತ್ತೂರು ನಗರ ಪೊಲೀಸರಿಗೆ ದೂರು ನೀಡುವುದಾಗಿ ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments