ಪುತ್ತೂರಿನ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಡಿ.21ರಿಂದ 28 ರವರೆಗೆ ನಡೆಯಲಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಲೋಕಪ್ಪಗೌಡ ಕರೆಮನೆ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕೆ.ಮೋಹನ್ ರೈ ಓಲೆಮುಂಡೋವು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಸಾದ್ ರೈ ಸೊರಕೆ,ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಆನಂದ ಭಂಡಾರಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಆನಂದ ಪೂಜಾರಿ ಸರ್ವೆದೋಳಗುತ್ತು, ದೇವಳದ ಪ್ರಧಾನ ಅರ್ಚಕ ಶ್ರೀರಾಮ ಕಲ್ಲೂರಾಯ, ವಿವಿಧ ಸಮಿತಿ ಸದಸ್ಯರಾದ ಬೆಳಿಯಪ್ಪಗೌಡ ಸರ್ವೆ, ವಿನಯ ಕುಮಾರ್ ರೈ, ತಾರನಾಥ ರೈ ಮೇಗಿನಗುತ್ತು, ರಸಿಕಾ ರೈ ಮೇಗಿನಗುತ್ತು, ಗೌತಮ್ ರೈ ಸರ್ವೆ, ವಸಂತ ರೈ ಸೊರಕೆ, ರಾಧಾಕೃಷ್ಣ ರೈ ರೆಂಜಲಾಡಿ, ಕುಕ್ಕ ಕಾಡಬಾಗಿಲು ಮತ್ತಿತರರು ಉಪಸ್ಥಿತರಿದ್ದರು.