ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕರಿಗೆ ಹಲ್ಲೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ
ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಜುರುಪಾದೆಯ ಅಬ್ದುಲ್ ಮಜೀದ್, ಪಂಜ ಎಣ್ಮೂರಿನ ಪಾರೂಕ್ ಅವರನ್ನು ಸೆ.1ರಂದು ತಡ ರಾತ್ರಿಯೇ ಪೊಲೀಸರು ಬಂಧಿಸಿದ್ದರು.
ಉಳಿದಂತೆ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದ ಪೊಲೀಸರು ಇದೀಗ ಇನ್ನೋರ್ವ ಆರೋಪಿ ಅಲೆಬಿ ಎಂಬವರನ್ನು ಬಂಧಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.