ಪುತ್ತೂರು ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಗೀತ ಗಾಯನ

ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಯಶಸ್ವಿಯಾಗಿ ನಡೆಯಿತು.

ಪುತ್ತೂರು ಮಿನಿ ವಿಧಾನ ಸೌಧದಲ್ಲಿ ತಹಶೀಲ್ದಾರ್ ರಮೇಶ್ ಬಾಬು, ಗ್ರೇಡ್ 2 ತಹಶೀಲ್ದಾರ್ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಹಯೋಗದಲ್ಲಿ ಲಕ್ಷ ಕಂಠಗಳ ಗೀತ ಗಾಯನ ನಡೆಯಿತು.

Related Posts

Leave a Reply

Your email address will not be published.