ಪುತ್ತೂರು : ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ
ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರ ಭದ್ರತೆಯಲ್ಲಿ ವ್ಯಾಕ್ಸಿನ್ ನೀಡಲಾಯಿತು.