ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕೆಂದು ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ HP ಪೆಟ್ರೋಲ್ ಪಂಪ್ ಹತ್ತಿರ ಪ್ರತಿಭಟನೆ ಮಾಡಲಾಯಿತು.
ತಿಕೋಟಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿರೇಶ ಸಿಂಧೂರ ಮಾತನಾಡಿ,ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ವ್ಯಾಪ್ತಿಗೆ ತರಬೇಕು ಎಂದು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬೇಡಿಕೆ ಇಟ್ಟಿದೆ. ವರದಿಗಳ ಪ್ರಕಾರ, ಇಂಧನ ಬೆಲೆ ಏರಿಕೆ ವಿರುದ್ಧ ರಾಷ್ಟ್ರಮಟ್ಟದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಕರ್ನಾಟಕ, ದೆಹಲಿ, ಪಂಜಾಬ್ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ 9.20 ರೂಪಾಯಿ ಆಗಿದ್ದು, ಈಗ 32 ರೂಪಾಯಿಗೆ ಏರಿಕೆಯಾಗಿದೆ. ಆ ನಿಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ಹಿಂಪಡೆಯುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಅಷ್ಟೇ ಅಲ್ಲ ಇಂಧನ ಜಿಎಸ್ ಟಿ ವ್ಯಾಪ್ತಿಗೆ ಬರಬೇಕು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ತಿಕೋಟಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿರೇಶ ಸಿಂಧೂರ , ಜಿಲ್ಲಾ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಕಾದರ್,ಸಾಗರ ತೊಳೆ,ವಸಿಮ್ ಅಕ್ರಂ,ಶರಣು ಕಂಠಿ,ರಾಜು ಜಪ್ಪಾರ,ಸೂಮು ತೇಲಿ,ಧರೇಪ,ಮತ್ತು ಪಕ್ಷದ ಎಲ್ಲ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಲಾಲಸಾಬ ಸವಾರಗೋಳ V4 ನ್ಯೂಸ್ ವಿಜಯಪುರ