ಪ್ರಧಾನಿ ಮೋದಿ ಜನ್ಮದಿನಾಚರಣೆ ಪ್ರಯುಕ್ತ ಸೇವಾ ಸಮರ್ಪಣ ಕಾರ್ಯಕ್ರಮ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ ಪ್ರಯುಕ್ತ “ಸೇವಾ ಸಮರ್ಪಣ ” ಎಂಬ ಕಾರ್ಯಕ್ರಮದ ಅಂಗವಾಗಿ ಪಡುಬಿದ್ರಿ ಗ್ರಾ.ಪಂ. ಸದಸ್ಯ ಮಹೇಂದ್ರ ಎಂಬವರ ಮನೆಯಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅಧ್ಯಕ್ಷತೆಯಲ್ಲಿ ಭಾನುವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಸಕರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತದನಂತರ ಭಾರತ ಮಾತೆ, ಪಂಡಿತ್ ದೀನ್ ದಯಾಳ್ ,ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ವಿಶೇಷ ಅಂಗವಾದ ಗೋಪೂಜೆಯನ್ನು ಹೂ ಹಾರ ಹಾಕಿ, ಅರಿಶಿನ ಕುಂಕುಮ ಹಚ್ಚಿ, ಪೂಜೆ ಮಾಡಿ ಆಹಾರ ನೀಡುವುದರೊಂದಿಗೆ ನೆರವೇರಿಸಲಾಯಿತು. ಗೋ ಸಾಕುವ ಮನೆಗಳಿಗೆ ಪಶು ಆಹಾರ ವಿತರಿಸಲಾಯಿತು.ನಂತರ ಭಾರತೀಯ ಜನತಾ ಪಕ್ಷದ ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸಭೆಯನ್ನುದ್ದೇಶಿಸಿ ಮಾತನಾಡಿ ಭಾರತೀಯ ಜನತಾ ಪಕ್ಷದ ನೇತಾರರು, ಕಾರ್ಯಕರ್ತರು ಹಾಗೂ ಪ್ರಧಾನಿ ಮೋದಿಯವರ ಹಾಗೂ ಶಾಸಕರ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಎಸ್.ಬಿ.ವಿ.ಪಿ.ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಸುಮತಿ ಹೆಗಡೆ, ಯಕ್ಷಗಾನ ಕಲಾವಿದ ರಮೇಶ್ ರಾವ್ ಹಾಗೂ ಸಾಮಾಜಿಕ ಸೇವೆಯನ್ನು ನಿರ್ವಹಿಸುವ ಸುಧಾಕರ ಪಾಂದೆ ಅವರನ್ನು ಸನ್ಮಾನಿಸಲಾಯಿತು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಪಡುಬಿದ್ರಿಯ ಅಭಿವೃದ್ಧಿಗೆ ತನ್ನಿಂದಾಗುವ ಸಹಕಾರ ನೀಡುವುದಾಗಿ ತಿಳಿಸಿದರು ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ಆಯೋಜಿಸಿದ್ದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ , ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಶಶಿಕಾಂತ್ ಪಡುಬಿದ್ರಿ ,ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್ ಜನತಾ ಪಕ್ಷ ಪಡುಬಿದ್ರಿಯ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಮಾರಿ ಯಶೋಧ ಪಂಚಾಯಿತ್ ಸದಸ್ಯ ಮಹೇಂದ್ರ ಉಪಸ್ಥಿತರಿದ್ದರು.