ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ಅಡ್ಯಾರುಗುತ್ತು ಶುಭಹಾರೈಸಿದರು.
ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಸದಸ್ಯ ಎ.ಕೆ.ಗಿರೀಶ್ ಶೆಟ್ಟಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಯರಾಂ ಶೇಖ, ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಗೋವಿಂದ ಶೆಣೈ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀನಿಧಿ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಜಾ, ನಿವೃತ್ತ ಮುಖ್ಯ ಶಿಕ್ಷಕ ದೇವದಾಸ್ ಕೆ. ಆರ್. ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.