ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್
ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮ ವ್ಯಾಪ್ತಿಯ ಕೆಂಪುಗುಡ್ಡೆ ಸಾರಿಗೆ ಎಂಬಲ್ಲಿನ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.ಬಾಲಕಿ ಶುಕ್ರವಾರ ಬೆಳಿಗ್ಗೆ ಸುಮಾರು 7 ಗಂಟೆಯ ವೇಳೆಗೆ ಶಾಲೆಗೆ ನಡೆದು ಕೊಂಡು ಹೋಗುತ್ತಿದ್ದ ವೇಳೆ ಪರಿಚಿತ ವ್ಯಕ್ತಿಯೋರ್ವ ಕಾರಿನಲ್ಲಿ ಬಂದು ಬಾಲಕಿಯನ್ನು ಪುಸಲಾಯಿಸಿ ಇತರರೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ. ಸಂತ್ರಸ್ತ ಬಾಲಕಿಯನ್ನು ಮಂಗಳೂರಿನ ಲೇಡಿಗೋಶ್ಚನ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದೆ.ಆರೋಪಿಗಳ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.