ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ
ಬಂಟ್ವಾಳ: ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿನ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಲಕ್ಷ್ಮಣ ಎಂಬವರ ಮಗ ಕಾರ್ತಿಕ್ ಎಂಬಾತನ ಮೃತದೇಹವಿದಾಗಿದ್ದು ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಸಂಜೆಯ ವೇಳೆ ಮನೆಯಿಂದ ಹೊರಟ ಕಾರ್ತಿಕ್ ತಡರಾತ್ರಿಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಇಂದು ಮುಂಜಾನೆ ೩ ಗಂಟೆಯ ವೇಳೆಗೆ ಮೃತದೇಹ ಪತ್ತೆಯಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ