ಬಂಟ್ವಾಳ: ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ಗೊಳಿಸಿ ಪ್ರತಿಭಟನೆ
ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ.
ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್ ಮೊಹಮ್ಮದ್,ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಸಹಾಯ ಹಸ್ತದ ಉಸ್ತುವಾರಿ ಅನಿತಾ ಹೇಮನಾಥ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ರೋಷನ್ ರೈ, ಮಾಜಿ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತ. ವಿ ಪೂಜಾರಿ,ಪುರಸಭಾ ಸದಸ್ಯ ಸಿದ್ಧಿಕ್ ಗುಡ್ಡೆಯಂಗಡಿ, ಮೊಹಮ್ಮದ್ ನಂದಾವರ ಮೊದಲಾದವರು ಉಪಸ್ಥಿತರಿದ್ದರು. ಇಂದಿಕಾ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಬುಧವಾರ ವಿ4 ನ್ಯೂಸ್ ವರದಿ ಪ್ರಕಟಿಸಿತ್ತು.