ಬಿಂದಿಯಾ ಎಲ್ ಶೆಟ್ಟಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ
ರಾಷ್ಟ್ರೀಯ ಸೇವಾ ಯೋಜನೆ 2019-20ನೇ ಸಾಲಿನ ಅತ್ಯುತ್ತಮ ಸ್ವಯಂಸೇವಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು.
ಸುರತ್ಕಲ್ನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಮೊದಲಿಗೆ ಸುರತ್ಕಲ್ ಜಂಕ್ಷನ್ನಿಂದ ಗೊವಿಂದದಾಸ ಕಾಲೇಜಿನ ವರೆಗೆ ಮೆರವಣಿಗೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬಿಂದಿಯಾ ಎಲ್ ಶೆಟ್ಟಿ ಅವರನ್ನು ಸಾರ್ವಜನಿಕರು ಅಭಿನಂದಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು, ಮುಂದಿನ ವರ್ಷದಿಂದ ಯುವತಿಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಟಿ ಬಚವೊ ಬೇಟಿ ಪಡಾವೋ ಯೋಜನೆಯಡಿ ಯುವಕ, ಯುವತಿಯರಿಗೆ ಸಮಾನ ಸಂಖ್ಯೆಯ ಪ್ರಶಸ್ತಿ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಎನ್ನೆಸ್ಸೆಸ್ಸ್ ಕಾರ್ಯಕರ್ತರನ್ನು ಬಳಸುವ ಪ್ರಸ್ತಾಪವಿದೆ ಎಂದು ಹೇಳಿದರು.
ನಂತರ ರಾಜ್ಯ ಎನ್ಎಸ್ಎಸ್ ಅಧಿಕಾರಿ ಮತ್ತು ಸರ್ಕಾರದ ಜಂಟಿ ಕಾರ್ಯದರ್ಶಿ ಡಾ. ಗಣನಾಥ್ ಶೆಟ್ಟಿ ಎಕ್ಕಾರ್ ಪ್ರಸ್ತಾವಿಕವಾಗಿ ಮಾತನಾಡಿದರು.
ಇದೇ ವೇಳೆ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂ ಸೇವಕಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಬಿಂದಿಯಾ ಎಲ್ ಶೆಟ್ಟಿ ಅವರು ಸನ್ಮಾನ ಸ್ವೀಕರಿಸಿದ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಶ್ವರರಾದ ವೇದಮೂರ್ತಿ ಐ. ರಮಾನಂದ ಭಟ್, ಗೋವಿಂದ ದಾಸ ಕಾಲೇಜಿ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ, ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ, ಪಣಂಬೂರು ಉತ್ತರ ಉಪ ವಿಭಾಗದ ಸಹಾಯಕ ಅಯುಕ್ತರಾದ ಎಸ್. ಮಹೇಶ್ ಕುಮಾರ್, ಸಾಮಾಜಿಕ, ಧಾರ್ಮಿಕ ಮುಖಂಡರಾದ ಮಹಾಬಲ ಮಾರ್ಲ ಕಡಂಬೋಡಿ, ಯಕ್ಷದ್ರುವ ಪಟ್ಲ ಫೌಂಡೇಶನ್ನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಸುಧಾಕರ್ ಎಸ್. ಪೂಂಜ, ಸುರತ್ಕಲ್ ಮಾತಾ ಡೆವಲಪ್ಪರ್ಸ್ನ ಸಂತೋಷ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.