ಬಿಎಸ್ವೈ ಅವರನ್ನ ಹಾಡಿಹೊಗಳಿದ ಪ್ರಧಾನಿ ನರೇಂದ್ರ ಮೋದಿ
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಬಿಎಸ್ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಎಸ್ವೈಗೆ ಪಕ್ಷ ಮೇಲಿನ ಬದ್ಧತೆ ಅವರ್ಣನೀಯವಾಗಿದೆ. ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಪಕ್ಷದ ಅಭಿವೃದ್ಧಿಗೆ ಅವರ ಕೊಡುಗೆ ಬಣ್ಣಿಸಲು ಸಾಧ್ಯವಿಲ್ಲ. ದಶಕಗಳ ಕಾಲ ರಾಜ್ಯವನ್ನು ಸುತ್ತಾಡಿ ಪಕ್ಷವನ್ನು ಕಟ್ಟಿದ್ದಾರೆ. ಯಡಿಯೂರಪ್ಪರವರು ಪಕ್ಷವನ್ನು ಕಟ್ಟಿದ್ದು ಸ್ಮರಣೀಯ ಕೊಡುಗೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಬಿಎಸ್ವೈ ಅವರನ್ನ ಹಾಡಿಹೊಗಳಿದ್ದಾರೆ.