ಬಿ.ಸಿ. ರೋಡ್‍ನ ಕೊಡಂಗೆಯಲ್ಲಿ ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತ್ಯು

ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ವೇಳೆ ನಡೆದಿದೆ.

ಬಾಗಲಕೋಟ ಜಿಲ್ಲೆಯ ಜಾವೂರು ನಿವಾಸಿ ಬಾಲಪ್ಪ ಎ.ಜಾವೂರು ಮೃತಪಟ್ಟ ವ್ಯಕ್ತಿ.ಬಾಲಪ್ಪ ಅವರು ಇಲ್ಲಿನ ರಸ್ತೆ ಕಾಮಗಾರಿ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕಳೆದ ಕೆಲ ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪರ್ಲಿಯಾ ಕೊಡಂಗೆ ಎಂಬಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು ಪ್ರಸ್ತುತ ಕಾಮಗಾರಿ ಪೂರ್ಣಗೊಂಡಿದೆ.
ಈ ರಸ್ತೆ ಕಾಂಕ್ರೀಟ್ ಕಾಮಗಾರಿಯ ಅವಧಿಯಲ್ಲಿ ಕೊಡಂಗೆ ಎಂಬಲ್ಲಿ ಖಾಲಿ ಜಾಗದಲ್ಲಿ ಜಲ್ಲಿ ರಾಶಿ ಹಾಕಲಾಗಿದ್ದು, ಕಾಮಗಾರಿಯ ಬಳಿಕ ಅಲ್ಲಿ ಉಳಿದ ಜಲ್ಲಿ ಕಲ್ಲುಗಳನ್ನು ಬೇರೆ ಕಾಮಗಾರಿಯ ಪ್ರದೇಶಕ್ಕೆ ಕೊಂಡು ಹೋಗುವ ಉದ್ದೇಶದಿಂದ ಬಾಲಪ್ಪ ಅವರು ಲಾರಿ ಯನ್ನು ಜಲ್ಲಿ ಲೋಡ್ ಮಾಡಲು ಕೊಡಂಗೆಯಲ್ಲಿ ನಿಲ್ಲಿಸಿದ್ದರು. ಲಾರಿ ನಿಲ್ಲಿಸಿ ಅಲ್ಲೇ ಪಕ್ಕದಲ್ಲಿ ಮೊಬೈಲ್ ಫೆÇೀನ್‍ನಲ್ಲಿ ಮಾತನಾಡುತ್ತಿದ್ದಾಗ ಲಾರಿ ಮುಂದೆ ಚಲಿಸುತ್ತಿರುವ ಬಗ್ಗೆ ಜಲ್ಲಿ ಲೋಡ್ ಮಾಡುತ್ತಿದ್ದ ಜೆಸಿಬಿ ಚಾಲಕ ಜೋರಾಗಿ ಕೂಗಿ ಹೇಳಿದ್ದು ಈ ಸಂದರ್ಭ ಚಲಿಸುವ ಲಾರಿ ಯನ್ನು ತಡೆಯಲು ಚಕ್ರದಡಿ ಕಲ್ಲು ಇಡುವ ಪ್ರಯತ್ನ ಕ್ಕೆ ಬಾಲಪ್ಪ ಮುಂದಾದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೆÇೀಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ: ಸಂದೀಪ್ ಬಂಟ್ವಾಳ

Related Posts

Leave a Reply

Your email address will not be published.