ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ
ಕಳೆದ 2 ದಿನದ ಹಿಂದೆ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಕ್ಕಳನ್ನು ಮಂಗಳೂರಿನಲ್ಲಿ ಅಟೋ ಚಾಲಕ ಪತ್ತೆ ಹಚ್ಚಿ ಪಾಂಡೇಶ್ವರ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದರು. ಒಟ್ಟಾರೆ ಪ್ರಕರಣ ಸುಖ್ಯಾಂತ್ಯ ಕಂಡಿದೆ.