ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ನಿಂದ ಎತ್ತಿನ ಬಂಡಿ ಆಂದೋಲನ
ಅಗತ್ಯ ವಸ್ತುಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್, ವಿಧಾನಸೌಧಕ್ಕೆ ಎತ್ತಿನ ಬಂಡಿ ಪ್ರಯಾಣ ಆರಂಭಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಎತ್ತಿನ ಬಂಡಿಯಲ್ಲಿ ವಿಧಾನಸೌಧದತ್ತ ತೆರಳಿದರು.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಆಗಿರುವ ತೊಂದರೆ ಕುರಿತು ಸಾಂಕೇತಿಕವಾಗಿ ಪ್ರತಿಭಟನೆ ವ್ಯಕ್ತಪಡಿಸಲು ಕಾಂಗ್ರೆಸ್ ನಾಯಕರು ಎತ್ತಿನ ಬಂಡಿ ಏರಿದ್ದಾರೆ. ಪಕ್ಷದ ನೂರಾರು ಕಾರ್ಯಕರ್ತರು ಅವರೊಂದಿಗೆ ಇದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್ನ ಹಲವು ಶಾಸಕರು ಎತ್ತಿನ ಬಂಡಿಯಲ್ಲೇ ವಿಧಾನಸೌಧದತ್ತ ತೆರಳಿದ್ರು.
ಸಿದ್ದರಾಮಯ್ಯ ಸ್ವತಃ ಎತ್ತಿನ ಬಂಡಿಯನ್ನು ಚಲಾಯಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಶಾಸಕ ಎಂ.ಬಿ. ಪಾಟೀಲ ಅವರು ಜತೆಗಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಿಂದ ಎತ್ತಿನ ಬಂಡಿಯಲ್ಲಿ ಹೊರಡುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಶಿವಕುಮಾರ್, ಬಿಜೆಪಿ ಸರ್ಕಾರ ದೇಶದ ಜನರ ಜೇಬಿಗೆ ಕೈಹಾಕಿ ದೋಚುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ಗೆ 25ಕಡಿಮೆ ಮಾಡಬೇಕು. ಎಲ್ಪಿಜಿ ಸಿಲಿಂಡರ್ ದರವನ್ನೂ ಕಡಿತ ಮಾಡಬೇಕು ಎಂದು ಆಗ್ರಹಿಸಿದರು.