ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಸೆಳೆದ ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಉಡುಪಿ ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಹಾಗೂ ಪರಿಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದರು.

ಈ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ , ಮಂಗಳೂರು, ಮೂಡಬಿದ್ರೆ, ಮುಲ್ಕಿ ತಾಲೂಕುಗಳ ಸುಮಾರು 26 ಗ್ರಾಮಗಳಲ್ಲಿ ರೈತರು ಸಮಸ್ಯೆ ಎದುರಿಸುತ್ತಿದ್ದು ರಾಜ್ಯ ಸರಕಾರ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಇಂಧನ ಸಚಿವ ಮಾನ್ಯ ಸುನಿಲ್ ಕುಮಾರ್ ರವರು ಸದ್ಯಕ್ಕೆ ಯೋಜನೆಯ ಕಾರ್ಯ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದು ಅಧಿವೇಶನ ಮುಗಿದ ಬಳಿಕ ಜನಪ್ರತಿನಿಧಿಗಳ ಹಾಗೂ ರೈತರ ಸಭೆ ಕರೆಯುವುದಾಗಿ ತಿಳಿಸಿದರು.

Related Posts

Leave a Reply

Your email address will not be published.