ಬೇಲೂರಿನಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಬೇಲೂರಿನ ಚೆನ್ನಕೇಶವ ದೇವಾಲಯ ಮುಂಭಾಗದಿಂದ 20 ಹೆಚ್ಚು ಟ್ಯಾಕ್ಟರ್ ಗಳ ಸಮೇತ ಪ್ರತಿಭಟನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಕೇಂದ್ರ ಸರ್ಕಾರವು ಸಾಕಷ್ಟು ರೈತರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಕೂಡ ರೈತರ ಸಂಕಷ್ಟದಲ್ಲಿದ್ದರೂ ಸಾಲ ಮನ್ನಾ ಮಾಡದೆ ರೈತರನ್ನು ಸಮಸ್ಯೆಗೆ ಸಿಲುಕಿಸುತ್ತಿದ್ದಾರೆ. ವಿಶ್ವ ವಾಣಿಜ್ಯ ಒಪ್ಪಂದ ಬೆಲೆ ಕುಸಿತ ವಿದ್ಯುತ್ ಖಾಸಗೀಕರಣ ಬಿತ್ತನೆ ಬೀಜ ರಸಗೊಬ್ಬರಗಳ ಬೆಲೆ ಹೆಚ್ಚಳ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಎಲ್ಲವನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಪ್ರತಿಭಟಿಸಿದರು. ಸ್ಪಂದಿಸದ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು ಹಾಗೂ ನಂಜುಂಡಪ್ಪ ವರದಿ ಜಾರಿಯಾಗಲೇಬೇಕು ಎಂದು ಒತ್ತಾಯಿಸಿದ್ದರು.