ಬೈಕಂಪಾಡಿಯಲ್ಲಿ ಮೀನುಗಾರರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ
ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಸುಮಿತ್ರಾ ಕರಿಯ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ರೆಡ್ ಕ್ರಾಸ್ ರಾಜ್ಯ ಸಮಿತಿ ಸದಸ್ಯರಾದ ಯತೀಶ್ ಬೈಕಂಪಾಡಿ, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಅಶ್ವಥ್, ಬೈಕಂಪಾಡಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಓಂದಾಸ್, ಮೊಗವೀರ ಸಂಘದ ಉಪಾಧ್ಯಕ್ಷ ಎನ್ ಆರ್ ಪುರುಷೋತ್ತಮ್ ಉಪಸ್ಥಿತರಿದ್ದರು.