ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಕುದ್ರೋಳಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಸಂಸದ ನಳಿನ್
ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ ಬಿಜೆಪಿ ಮುಖಂಡರು ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.