HomeFresh Newsಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು.

ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರನ್ನು 58 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿಗೆ ಉಪಚುನಾವಣೆ ಗೆಲುವು ಮುಖ್ಯವಾಗಿತ್ತು. ಆರಂಭಿಕ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದು, ಟಿಎಂಸಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments