ಭಾರೀ ಮಳೆ : ದಕ್ಷಿಣ ಕನ್ನಡ ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆheavy rain mangalore

ಜಿಲ್ಲೆಯಲ್ಲಿ ನಿನ್ನೆಯವರೆಗೆ 24 ಗಂಟೆಗಳ ಅವಧಿಯಲ್ಲಿ 66.3 ಮಿ.ಮೀ ಮಳೆಯಾಗಿದೆ. ಒಂದು ಮನೆಗೆ ಸಂಪೂರ್ಣ ಹಾನಿಯಾಗಿದ್ದು, 8 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಭಾರಿ ಮಳೆಗೆ ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ.
ಬಂಟ್ವಾಳದಲ್ಲಿ ನೇತ್ರಾವತಿ ನದಿ 5.1 ಮೀಟರ್, ಉಪ್ಪಿನಂಗಡಿಯಲ್ಲಿ 21 ಮೀಟರ್, ಗುಂಡ್ಯ ನದಿ 4.4 ಮೀಟರ್ ತುಂಬಿ ಹರಿಯುತ್ತಿದೆ

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿರುಸಿನ ಮಳೆ ಮುಂದುವರೆದಿದೆ. ಇನ್ನೂ ಭಾರಿ ಮಳೆಗೆ ಸಮುದ್ರದ ಅಲೆಗಳ ಅಬ್ಬರವು ಹೆಚ್ಚಾಗಿದೆ.ಜುಲೈ 20ರವರೆಗೆ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ

Related Posts

Leave a Reply

Your email address will not be published.