ಭೈರಪ್ಪ ಹುಟ್ಟೂರು ಅಭಿವೃದ್ಧಿಗೆ ಸರ್ಕಾರ ಬದ್ಧ -ಸಚಿವ ಸುನಿಲ್ ಕುಮಾರ್
ಮೈಸೂರು: ಡಾ. ಎಸ್ ಎಲ್ ಭೈರಪ್ಪ ಅವರ ಹುಟ್ಟೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.
ಅವರು ಇಂದು ಮೈಸೂರಿನಲ್ಲಿ ಡಾ.ಎಲ್ ಎಲ್ ಭೈರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದರು.ಎಸ್ಎಲ್ ಭೈರಪ್ಪ ಅವರ ಜೊತೆ ಸೌಹಾರ್ದಯುತ ಮಾತುಕತೆ ನಡೆಸಿದ ಸಚಿವ ಸುನಿಲ್ ಕುಮಾರ್ ನಾಡಿನ ಕಲೆ ಸಾಹಿತ್ಯ ಹಾಗೂ ಸಂಸ್ಕೃತಿ ಕುರಿತಂತೆ ವಿಚಾರ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಭೈರಪ್ಪ ಅವರು ತಮ್ಮ ಹುಟ್ಟೂರಾದ ಸಂತೆ ಶಿವರ ಗ್ರಾಮದ ಅಭಿವೃದ್ಧಿಗಾಗಿ ಸರ್ಕಾರ 5 ಕೋಟಿ ಬಿಡುಗಡೆ ಮಾಡಿದೆ, ಆದರೆ ಕಾಮಗಾರಿ ವಿಳಂಬವಾಗುತ್ತಿದೆ ಎಂಬ ಅಂಶವನ್ನು ಸಚಿವರ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವ ಸುನಿಲ್ ಕುಮಾರ್ ಈ ಬಗ್ಗೆ ಕೂಡಲೇ ಸಂಬಂಧಪಟ್ಟವರ ಜೊತೆ ಮಾತನಾಡಿ ಕಾಮಗಾರಿಗಳ ಸಮರ್ಪಕ ಅನುಷ್ಠಾನಕ್ಕೆ ಸೂಚಿಸುವುದಾಗಿ ತಿಳಿಸಿದರು.