ಮಂಗಳೂರಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ: ಕೇರಳ ಗಡಿ ಪ್ರದೇಶ ತಲಪಾಡಿಗೆ ಭೇಟಿ
ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕಮೀಷನರ್ ಎನ್.ಶಶಿಕುಮಾರ್ ಭಾಗಿಯಾಗಿದ್ದರು.