ಮಂಗಳೂರಿನಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆ
ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ.
ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ ಮೂಡಿಸಿದೆ.ಈ ಹಿಂದೆ ಸ್ಮಾರ್ಟ್ ಸಿಟಿ ಕಾಮಗಾರಿಯ ವೇಳೆ ಹಂಪನಕಟ್ಟೆಯಲ್ಲಿಯೂ ನೂರಾರು ವರ್ಷ ಹಳೆಯದಾದ ಬಾವಿ ಪತ್ತೆಯಾಗಿತ್ತು. ಸ್ಥಳಕ್ಕೆ ಮಂಗಳೂರು ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಸ್ಮಾರ್ಟ್ ಸಿಟಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.