ಮಂಗಳೂರಿನಲ್ಲಿ ವಿಶ್ವಹಿಂದು ಪರಿಷತ್, ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ ನಡೆಸಿದರು.
ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ಎಲ್ಲಾ ದುರ್ಗಾವಾಹಿನಿಯ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿಭಾಗ ಮಾತೃಶಕ್ತಿ ಪ್ರಮುಖ್ ಶ್ರೀಮತಿ ಸುರೇಖಾ ರಾಜ್, ಜಿಲ್ಲಾ ಮಾತೃಶಕ್ತಿ ಸಹ ಪ್ರಮುಖ್ ಶ್ರೀಮತಿ ನಯನ ತೇಜ್, ಜಿಲ್ಲಾ ದುರ್ಗಾವಾಹಿನಿ ಸಂಯೋಜಕಿ ಶ್ರೀಮತಿ ಶ್ವೇತ. ದುರ್ಗಾವಾಹಿನಿ ಸಹ ಸಂಯೋಜಕಿ ಗೌಷಿತ ಕುತ್ತಾರ್, ವಿದ್ಯಾರ್ಥಿನಿ ಪ್ರಮುಖ್ ಚೇತನಾ ಬಜ್ಜೋಡಿ ಹಾಜರಿದ್ದರು.