ಮಂಗಳೂರಿನ ಎಸ್‌ ಸಿಡಿಸಿಸಿ ಬ್ಯಾಂಕ್‌ ನಿಂದ ರೈತಸ್ಪಂದನ ಕಾರ್ಯಕ್ರಮ:ವಿವಿಧ ಕೃಷಿ ಸಾಲ ವಿತರಣೆ

ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

 ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ’ರೈತ ಸ್ಪಂದನ’ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಕೃಷಿಕರಿಗೆ ವಿವಿಧ ರೀತಿಯ ಸಾಲ ವಿತರಿಸಿದರು. ಬಳಿಕ ಮಾತನಾಡಿದ್ರು, ಕೋವಿಡ್ ಸಂತ್ರಸ್ತ 10,400 ರೈತರ 81 ಕೋಟಿ ರೂ ಸಾಲವನ್ನು ಸಹಕಾರಿ ಸಂಘಗಳ ಮೂಲಕ ಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ. ಈ ನಿಟ್ಟಿನಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ೧೫೪ ಕೋವಿಡ್ ಸಂತ್ರಸ್ತರಿಗೆ ತಲಾ ಒಂದು ಲಕ್ಷ ರೂ. ಸಾಲಮನ್ನಾ ಯೋಜನೆಗೆ ಚಾಲನೆ ನೀಡುವ ಮೂಲಕ ರಾಜ್ಯದಲ್ಲಿ ಪ್ರಥಮವಾಗಿ ಮಾದರಿ ಕಾರ್ಯಕ್ರಮ ಮಾಡಿರುವುದು ಶ್ಲಾಘನೀಯ ಎಂದು ಸಚಿವ ಸೋಮಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದರು. ರೈತ ಸ್ಪಂದನ ಕಾರ್ಯಕ್ರಮದ ಮೂಲಕ ಉಡುಪಿ, ದ.ಕ ಜಿಲ್ಲೆಯ ಸುಮಾರು 750ಕ್ಕೂ ಅಧಿಕ ರೈತರಿಗೆ ಸುಮಾರು ೪೫೫ ಕೋಟಿ ರೂ.ಗಳಿಗೂ ಅಧಿಕ ಸಾಲ ನೀಡುವ ಕಾರ್ಯ ಕ್ರಮ ಹಮ್ಮಿಕೊಂಡಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಎಸ್.ಸಿ.ಡಿ.ಸಿ.ಸಿ. ಬ್ಯಾಂಕನ್ನು ಅಭಿನಂದಿಸಿದರು.

ಸಮಾರಂಭ ದ ಅಧ್ಯಕ್ಷತೆ ವಹಿಸಿದ್ದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಸಹಕಾರಿ ಸಂಘ ಜನರ ಸಂಸ್ಥೆಯಾಗಿ ಬೆಳೆಯಲು ಸಹಕಾರಿ ಸಚಿವರು ಬೆಂಬಲ ನೀಡಿದ್ದಾರೆ. ಬ್ಯಾಂಕ್ ಕೋವಿಡ್ ಸಂದರ್ಭದ ಎಂದು ಜನರ ನೆರವಿಗೆ ನಿಂತಿದೆ. 26 ವರ್ಷದಲ್ಲಿ ನಿರಂತರ ಕೃಷಿ ಸಾಲ ಮರುಪಾವತಿ ಮಾಡಿದ ದೇಶದ ಅಗ್ರಸ್ಥಾನದ ಬ್ಯಾಂಕ್ ಎಸ್ ಸಿಡಿಸಿಸಿ ಬ್ಯಾಂಕ್ ಎನ್ನುವುದು ಹೆಮ್ಮೆಯ ಸಂಗತಿ. ಕೋವಿಡ್ ನಿಂದ ಮೃತಪಟ್ಟ ರೈತ ಕುಟುಂಬದ ಕೃಷಿ ಸಾಲದಲ್ಲಿ ಗರಿಷ್ಠ ಒಂದು ಲಕ್ಷ ರೂ. ಸಾಲ ಮನ್ನಾ ಮಾಡಲು ನಿರ್ಧರಿಸಿರುವುದು ರಾಜ್ಯದಲ್ಲಿ ಪ್ರಥಮ ಎಂದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವ-ಸಹಾಯ ಸಂಘಗಳಿಗೆ ಸಾಲ ವಿತರಣೆ ನೆರವೇರಿಸಿ ಶುಭ ಹಾರೈಸಿದರು.ಪ್ರಧಾನ ಮಂತ್ರಿ ಸ್ವ-ನಿಧಿ ಸಾಲ ವಿತರಣೆಯನ್ನು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇದರ ಅಧ್ಯಕ್ಷ ಬೆಳ್ಳಿ ಪ್ರಕಾಶ್ ನೆರವೇರಿಸಿದರು. ಮೂಡುಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಮೀನುಗಾರರ ಸಾಲ ವಿತರಣೆ ಕಾರ್ಯಕ್ರಮ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಶಾಸಕ ವೇದವ್ಯಾಸ ಕಾಮತ್, ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಬಿ.ನಿರಂಜನ, ಟಿ.ಜಿ.ರಾಜರಾಮ ಭಟ್, ಎಂ.ವಾದಿರಾಜ ಶೆಟ್ಟಿ, ರಾಜು ಪೂಜಾರಿ, ಎಸ್.ಬಿ.ಜಯರಾಮ ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಮೋನಪ್ಪ ಶೆಟ್ಟಿ, ಕೆ.ಹರಿಶ್ಚಂದ್ರ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್, ಜೈರಾಜ್ ಬಿ., ಮೀನುಗಾರರ ಒಕ್ಕೂಟದ ಅಧ್ಯಕ್ಷ ಯಶ್ಪಾಲ್ ಸುವರ್ಣ, ಕೆಎಂಎಫ್ ದ.ಕ. ಜಿಲ್ಲಾಧ್ಯಕ್ಷ ರವಿರಾಜ ಹೆಗ್ಡೆ, ದ.ಕ. ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ಯ ರೈ, ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಇಂದ್ರಾಳಿ, ಅಪೆಕ್ಸ್ ಬ್ಯಾಂಕ್ ಸಿಇಒ ದೇವರಾಜ್ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು , ನಿರ್ದೇಶಕ ಶಶಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.