ಮಂಗಳೂರಿನ ಜೈಲ್ ರೋಡ್ ಬಳಿ ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ
ಮಂಗಳೂರಿನ ಜೈಲ್ ರೋಡ್ ಬಳಿಯ ಇರುವ ಡಯಟ್ ಸಂಸ್ಥೆಯ ಒಳಗೆ ನುಗ್ಗಿದ ದುಷ್ಕರ್ಮಿಯೋರ್ವ ಮೂವರು ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ ನಡೆಸಿ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ರೀನ, ಗುಣವತಿ, ನಿರ್ಮಲ ಎಂದು ಗುರುತಿಸಲಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಹಾಗೂ ಹಿರಿಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು, ತಲವಾರು ಮಾದರಿಯ ಆಯುಧದಿಂದ ಏಕಾಏಕಿಯಾಗಿ ಸಂಸ್ಥೆಯೊಳಗೆ ನುಗ್ಗಿದ ವ್ಯಕ್ತಿ ಹಲ್ಲೆ ನಡೆಸಿದ್ದು, ನಿರ್ಮಲ ಅವರ ಪರಿಸ್ಥಿತಿ ಗಂಭೀರವಾಗಿದೆ. ಮೂವರು ಪ್ರಾಣಪ್ರಾಯದಿಂದ ಪಾರಾಗಿದ್ದಾರೆ. ಇನ್ನು ಹಲ್ಲೆ ಮಾಡಿದ ವ್ಯಕ್ತಿಯನ್ನ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ರು.
ಇನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ|ಕುಮಾರ್ ಮಾತನಾಡಿ, ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ. ಆತನ ವಿರುದ್ಧ ಕ್ರಮ ತೆಗೆದುಕೊಳ್ಳಲು ಪೊಲೀಸ್ ಆಯ್ತುಕರಿಗೆ ಹೇಳಲಾಗಿದೆ ಎಂದು ಹೇಳಿದರು. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.