ಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ: ಕಾಸರಗೋಡಿನ ವ್ಯಕ್ತಿ ವಶಕ್ಕೆ
ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.