ಮಂಗಳೂರು ದಸರಾ ಮಹೋತ್ಸವ ಸಂಪನ್ನ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು.
ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು ಬಳಿಕ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನಡೆದು ಅವಭೃಥ ಸ್ನಾನ ನಡೆಯಿತು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ವರ್ಣರಂಜಿತ ಮೆರವಣಿಗೆ ಇರಲಿಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಸಾಂಕೇತಿಕವಾಗಿ ರಾಜಬೀದಿಯಲ್ಲಿ ನಗರ ಪ್ರದಕ್ಷಿಣೆ ನಡೆಸಲಾಯಿತು.